ETV Bharat / state

ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ: ಮಠದಲ್ಲಿ ಪೂರ್ವಾರಾಧನೆ ಸಂಭ್ರಮ

ಶ್ರೀಗುರು ರಾಘವೇಂದ್ರ ಸ್ವಾಮಿಗಳ 350 ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ.

Sri Raghavendra Swami
ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ
author img

By

Published : Aug 23, 2021, 12:49 PM IST

ರಾಯಚೂರು: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಪೂರ್ವಾರಾಧನೆ ಕಾರ್ಯಕ್ರಮ ನಡೆಯಿತು.

ಬೆಳಗ್ಗೆ ಪಾದುಕೆ ಪೂಜೆ, ಬಳಿಕ ಮೂಲ ಬೃಂದವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿತು. ನಂತರ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಮೂಲ ದೇವರ ಪೂಜೆ ನಡೆಸಿದರು. ಸಂಜೆಯ ವೇಳೆಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ

ರಾಯರ ಮಠದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಮಠದ 'ಮಂತ್ರಾಲಯ ವಾಹಿನಿ' ಯುಟ್ಯೂಬ್ ಚಾನಲ್ ನೇರಪ್ರಸಾರದ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಶ್ರೀಮಠದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಆರಾಧನಾ ಮಹೋತ್ಸವ ಸಂದರ್ಭದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಮಠದ ಸಿಬ್ಬಂದಿ, ಅರ್ಚಕರು, ಅಧಿಕಾರಿಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಕೊರೊನಾ ನಿಯಮ ಪಾಲಿಸುವಂತೆ ಸೂಚನೆ ನೀಡಿ, ಭಕ್ತರು ಪಾಲ್ಗೊಳ್ಳಬಹುದಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.