ETV Bharat / state

ನಾರಾಯಣಪುರ ಜಲಾಶಯದಿಂದ 4.17 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಮನೆಗಳು ಜಲಾವೃತ - water released from Narayanpur reservoir

ನಾರಾಯಣಪುರ ಜಲಾಶಯದಿಂದ 4.17 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದರಿಂದ ರಾಯಚೂರು ಜಿಲ್ಲೆಯ ಶೀಲಹಳ್ಳಿ, ಹೂವಿನಹೆಡಗಿ, ಗುರ್ಜಾಪುರ ಸೇರಿದಂತೆ ನಾನಾ ಸೇತುವೆಗಳು ಜಲಾವೃತಗೊಂಡು ಸಂಚಾರ ಬಂದ್ ಆಗಿದೆ.

Narayanpur reservoir
ನದಿ ಪಾತ್ರದ ಗ್ರಾಮಗಳಿಗೆ ನುಗ್ಗಿದ ನೀರು
author img

By

Published : Jul 31, 2021, 9:11 AM IST

ರಾಯಚೂರು: ನಾರಾಯಣಪುರ ಜಲಾಶಯದಿಂದ ಇಂದು ಬೆಳಗ್ಗೆ 4.17 ಲಕ್ಷ ಕ್ಯೂಸೆಕ್​ ನೀರನ್ನು ಕೃಷ್ಣಾ ನದಿಗೆ ಹರಿ ಬಿಡಲಾಗಿದ್ದು, ದೇವದುರ್ಗ, ಲಿಂಗಸೂಗೂರು, ರಾಯಚೂರು ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಮುಂದುವರೆದಿದೆ.

ನಾರಾಯಣಪುರ ಜಲಾಶಯದಲ್ಲಿ ಇಂದು ಬೆಳಗ್ಗೆ 6 ಗಂಟೆಗೆ 4 ಲಕ್ಷದ 17 ಸಾವಿರ ಕ್ಯೂಸೆಕ್​ ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ಜಿಲ್ಲೆಯ ದೇವದುರ್ಗ ತಾಲೂಕಿನ ನದಿ ತೀರದಲ್ಲಿರುವ ಅಂಜಲಾ ಗ್ರಾಮಕ್ಕೆ ನೀರು ನುಗ್ಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತವಾಗಿದೆ. ಕೆಲ ಮನೆಗಳು ನೀರಿನಿಂದ ಜಲಾವೃತಗೊಂಡಿದ್ದು, ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಸೇರಿದಂತೆ ಗೃಹಪಯೋಗಿ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ನದಿ ಪಾತ್ರದ ಗ್ರಾಮಗಳಿಗೆ ನುಗ್ಗಿದ ನೀರು

ಪ್ರವಾಹದಿಂದಾಗಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು. ಶುದ್ಧ ಕುಡಿಯುವ ನೀರು ಪೂರೈಕೆಗೆ ಸಂತ್ರಸ್ತರು ಒತ್ತಾಯಿಸಿದ್ದಾರೆ. ಜಿಲ್ಲೆಯ ಶೀಲಹಳ್ಳಿ, ಹೂವಿನಹೆಡಗಿ, ಗುರ್ಜಾಪುರ ಸೇರಿದಂತೆ ನಾನಾ ಸೇತುವೆಗಳು ಜಲಾವೃತಗೊಂಡು ಸಂಚಾರ ಬಂದ್ ಆಗಿದೆ.

ಜಿಲ್ಲೆಗೆ ಎದುರಾಗಿರುವ ಪ್ರವಾಹದ ಭೀತಿಯನ್ನು ಎದುರಿಸಲು ಆಯಾ ಗ್ರಾಮಗಳ ವ್ಯಾಪ್ತಿಯೊಳಗೆ ಸಂಬಂಧಿಸಿದ ಅಧಿಕಾರಿಗಳನ್ನು ನಿಯೋಜನೆ ಮಾಡುವ ಮೂಲಕ ಅಗತ್ಯ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.