ETV Bharat / state

ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ 45,970 ಕ್ಯೂಸೆಕ್ ನೀರು ಬಿಡುಗಡೆ

ನಿನ್ನೆ ಕೃಷ್ಣಾ ನದಿಗೆ ನಾರಾಯಣಪುರ ಅಣೆಕಟ್ಟೆಯಿಂದ 45,970 ಕ್ಯೂಸೆಕ್ ನೀರು ಹರಿಬಿಡಲಾಗಿದೆ.

Dam
Dam
author img

By

Published : Jul 16, 2020, 10:44 AM IST

ಲಿಂಗಸುಗೂರು: ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ 45,970 ಕ್ಯೂಸೆಕ್ ನೀರು ಹರಿಬಿಡಲಾಗಿದೆ ಎಂದು ಅಣೆಕಟ್ಟೆ ಕಿರಿಯ ಇಂಜಿನಿಯರ್‌ ವಿಜಯಕುಮಾರ್ ಅರಳಿ ತಿಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಗೆ ಅಣೆಕಟ್ಟೆ ನೀರಿನ ಮಟ್ಟ 492.252 ಮೀಟರ್ ಇದ್ದು, 491.600 ಮೀಟರ್ ಮಟ್ಟ ಕಾಪಾಡಿಕೊಂಡು 7 ಕ್ರಸ್ಟ್​​​ಗೇಟ್​​ಗಳ ಮೂಲಕ ಕೃಷ್ಣಾ ನದಿಗೆ ನೀರು ಬಿಡಲಾಗಿದೆ ಎಂದರು.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆ ಬರುತ್ತಿದ್ದು, ಆಲಮಟ್ಟಿ ಜಲಾಶಯದಿಂದ 45,000 ಕ್ಯೂಸೆಕ್ ನೀರು ಹರಿ ಬಿಡಲಾಗಿದೆ. ಹಂತ ಹಂತವಾಗಿ ಒಳ ಹರಿವು ಆಧರಿಸಿ ಕೃಷ್ಣಾ ನದಿಗೆ ಬಿಡುವ ನೀರಿನ ಪ್ರಮಾಣ ಹೆಚ್ಚು ಕಡಿಮೆ ಆಗಲಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.