ರಾಯಚೂರು: ಕೊರೊನಾ ಮುಕ್ತ ಭಾರತ ನಿರ್ಮಾಣಕ್ಕೆ ಜಿಲ್ಲೆಯ ಅರಕೇರಾ ಭಾಗ್ಯವಂತಿ ಮಹಿಳಾ ಸಹಕಾರಿ ಸಂಘವು 50 ಸಾವಿರ ರೂಪಾಯಿ ದೇಣಿಗೆ ನೀಡಿದೆ.

ಸಂಘದ ಅಧ್ಯಕ್ಷೆ ಶ್ರೀದೇವಿ ನಾಯಕ ಕೆಪಿಸಿಸಿಗೆ ಚೆಕ್ ಹಸ್ತಾಂತರಿಸಿದ್ದಾರೆ. ಕೊರೊನಾದಿಂದ ದೇಶವೇ ಸಂಕಷ್ಟಕ್ಕೆ ಸಿಲುಕಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಕೊರೊನಾ ವೈರಸ್ನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಸಂಘದಿಂದ 50 ಸಾವಿರ ರೂಪಾಯಿ ನೀಡಲಾಗಿದೆ.