ETV Bharat / state

ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಂದ 61 ಅಭ್ಯರ್ಥಿಗಳ ಸ್ಪರ್ಧೆ - ಕರ್ನಾಟಕ ವಿಧಾನಸಭೆ ಚುನಾವಣೆ 2023

ಈ ಬಾರಿಯ ವಿಧಾನಸಭೆ ಚುನಾವಣೆಗೆ ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 61 ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ.

ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು
ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು
author img

By

Published : Apr 25, 2023, 1:21 PM IST

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 61 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಏಪ್ರೀಲ್ 24 ರಂದು 13 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. 7 ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದ 74 ಅಭ್ಯರ್ಥಿಗಳ ಪೈಕಿ 13 ಜನರು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. 61 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಈ ಅಭ್ಯರ್ಥಿಗಳು ಚುನಾವಣಾ ಅಂತಿಮ ಕಣದಲ್ಲಿದ್ದಾರೆ.

ಕ್ಷೇತ್ರವಾರು ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ: ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ನಾಪತ್ರಗಳು ಸಲ್ಲಿಸಿದ್ದು ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿವೆ. 8 ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದುಕೊಂಡಿಲ್ಲ.

ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 21 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, ಒಟ್ಟು 18 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಮಾನವಿ ವಿಧಾನಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. 6 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದುಕೊಂಡಿದ್ದಾರೆ. ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 6 ಅಭ್ಯರ್ಥಿಗಳು ನಾಪಮತ್ರ ಕ್ರಮಬದ್ಧವಾಗಿವೆ. ಒಬ್ಬ ಅಭ್ಯರ್ಥಿ ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 5 ಜನ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ನಾಮಪತ್ರ ಸಲ್ಲಿಸಿದ ಒಬ್ಬ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಸದ್ಯ 7 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಅದರಲ್ಲಿ 5 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. ಅಂತಿಮವಾಗಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ೭ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಅಲ್ಲದೇ ಈ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದಿಲ್ಲ. ಹೀಗಾಗಿ ಒಟ್ಟು 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದುಕೊಂಡಿದ್ದರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರಿ ಕುತೂಹಾಲ ಕೆರಳಿಸಿದ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಸಿಸಿ ಕಾರ್ಯದರ್ಶಿ ಎನ್.ಬೋಸರಾಜ್ ಪುತ್ರ ರವಿಬೋಸರಾಜ್ ಹಾಗೂ ಸಿಂಧನೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಬಸವನಗೌಡ ಬಾದರ್ಲಿ, ಮಾನವಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತನುಶ್ರೀ ತಮ್ಮ ಉಮೇದುವರಿಕೆಯನ್ನು ಹಿಂಪಡೆದುಕೊಂಡಿದ್ದು ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಯಾವ ಜಿಲ್ಲೆಯಲ್ಲಿ ಎಷ್ಟು ನಾಮಪತ್ರಗಳು ಕ್ರಮಬದ್ಧ, ಎಷ್ಟು ತಿರಸ್ಕೃತ?

3632 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಇನ್ನು ರಾಜ್ಯದ 224 ಕ್ಷೇತ್ರಗಳಲ್ಲಿ 3632 ಅಭ್ಯರ್ಥಿಗಳಿಂದ ಒಟ್ಟು 5102 ನಾಮಪತ್ರ ಸಲ್ಲಿಕೆಯಾಗಿದ್ದವು. 3632 ಅಭ್ಯರ್ಥಿಗಳ ಪೈಕಿ 3130 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. 502 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಚುನಾವಣೆ ಆಯೋಗ ತಿಳಿಸಿದೆ.

ಇದನ್ನೂ ಓದಿ: 502 ನಾಮಪತ್ರಗಳು ತಿರಸ್ಕೃತ, 3130 ಅಭ್ಯರ್ಥಿಗಳ ಉಮೇದುವಾರಿಕೆ ಕ್ರಮಬದ್ಧ: ಚುನಾವಣಾ ಆಯೋಗ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.