ಲಿಂಗಸುಗೂರು: ರಾಯಚೂರು, ಯಾದಗಿರಿ ಜಿಲ್ಲೆಗಳ ಮಧ್ಯೆ ಗಡಿ ಭಾಗದಲ್ಲಿರುವ ಕೃಷ್ಣಾ ನದಿಗೆ ಗುರುವಾರ ಸಂಜೆ 61,350 ಕ್ಯೂಸೆಕ್ ನೀರು ಬಿಡಲಾಗಿದೆ.
ನಾರಾಯಣಪುರ ಅಣೆಕಟ್ಟೆಯ ಗರಿಷ್ಠ ಮಟ್ಟ 4,92.25ಮೀ ಪೈಕಿ 4,91,420 ಮೀ. ಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ.
ಅಣೆಕಟ್ಟೆಯ 9 ಕ್ರೆಸ್ಟ್ ಗೇಟ್ ಮೂಲಕ ನೀರು ಹರಿಸಲಾಗುತ್ತಿದೆ. ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆ ಬೀಳುತ್ತಿದ್ದು, ನದಿಗೆ ಹರಿಸುವ ನೀರಿನ ಪ್ರಮಾಣ ಹೆಚ್ಚಾಗಲಿದೆ ಎಂದು ಅಣೆಕಟ್ಟೆ ಕಿರಿಯ ಎಂಜಿನಿಯರ್ ವಿಜಯಕುಮಾರ ಅರಳಿ ತಿಳಿಸಿದ್ದಾರೆ.