ರಾಯಚೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ತಾಲೂಕಿನ ತಲಮಾರಿ ಗ್ರಾಮವೊಂದರಲ್ಲೇ ಕಳೆದ ಮೂರ್ನಾಲ್ಕು ದಿನಗಳಲ್ಲಿ 70 ಸೋಂಕಿತರು ಪತ್ತೆಯಾಗಿದ್ದಾರೆ.
ಗಡಿ ಭಾಗದಲ್ಲಿರುವ ತಲಮಾರಿ ಗ್ರಾಮ ಹೆಚ್ಚಾಗಿ ಆಂಧ್ರ ಪ್ರದೇಶದ ಜೊತೆ ನಂಟು ಹೊಂದಿರುವ ಹಿನ್ನೆಲೆ ಸೋಂಕು ಹರಡಿದೆ ಎನ್ನಲಾಗುತ್ತಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಈಗಾಗಲೇ ಗ್ರಾಮದಲ್ಲಿನ ಹಲವು ಓಣಿಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಿ, ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಅನಗತ್ಯವಾಗಿ ಮನೆಯಿಂದ ಹೊರಗಡೆ ಬರದಂತೆ ಎಚ್ಚರಿಕೆ ನೀಡಲಾಗಿದೆ.