ರಾಯಚೂರು: ಜಿಲ್ಲೆಯಲ್ಲಿ ಇಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 10,694ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 25, ಮಾನವಿ 16, ಲಿಂಗಸೂಗೂರು 13, ಸಿಂಧನೂರು 5, ದೇವದುರ್ಗ 13 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 8966 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಇನ್ನುಳಿದ 1595 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿನಿಂದ ಇಲ್ಲಿಯವರೆಗೆ 133 ಜನ ಮೃತಪಟ್ಟಿದ್ದಾರೆ.
ರಿಮ್ಸ್, ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ 342 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಾಲೂಕಿನ ಸ್ವಾಂಸ್ಥಿಕ ಕ್ವಾರಂಟೈನ್ನಲ್ಲಿ 90 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎನ್ಎಂಸಿಎಚ್, ಖಾಸಗಿ ಕೋವಿಡ್ ಆಸ್ಪತ್ರೆ, ಹೋಟೇಲ್ ಕ್ವಾರೆಂಟೈನ್ನಲ್ಲಿ 191 ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಕ್ವಾರಂಟೈನ್ ನಲ್ಲಿ 972 ಇದ್ದಾರೆ. ಇಂದು ಪತ್ತೆಯಾಗಿರುವ ಸೋಂಕಿತರ ಸಂಪರ್ಕಗಳನ್ನ ಸಂಗ್ರಹಿಸುವ ಕಾರ್ಯ ನಡೆಸಲಾಗಿಸುವ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.