ರಾಯಚೂರು : ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣದಲ್ಲಿ 8 ಜನ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಏಪ್ರಿಲ್ 17ರಂದು ನಡೆಯಲಿರುವ ಚುನಾವಣೆಗೆ 10 ಅಭ್ಯರ್ಥಿಗಳು 13 ನಾಮಪತ್ರ ಸಲ್ಲಿಸಿದ್ದರು.
ಸಲ್ಲಿಕೆಯಾದ ನಾಮಪತ್ರಗಳಲ್ಲಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಉಳಿದ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಎರಡು ನಾಮಪತ್ರಗಳ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಗಳಾದ ಟಿ.ಚಕ್ರವರ್ತಿ ನಾಯಕ, ಸಿದ್ದಲಿಂಗಪ್ಪ ಇಬ್ಬರೂ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿಯಾದ ಪ್ರತಾಪಗೌಡ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿಯಾದ ಬಸನಗೌಡ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾದ ಓಬಳೇಶಪ್ಪ ಬಿ ಟಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೀಪಿಕಾ ಎಸ್, ಶ್ರೀನಿವಾಸ ನಾಯಕ, ಅಮರೇಶ, ಈಶಪ್ಪ, ಬಸನಗೌಡ ಸೇರಿ ಒಟ್ಟು 8 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ ಎಂದು ಮಸ್ಕಿ ಉಪಚುನಾವಣೆಯ ಚುನಾವಣಾಧಿಕಾರಿ ರಾಜಶೇಖರ ಡಂಬಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಸವಕಲ್ಯಾಣ ಉಪಸಮರ: ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗ್ತಾರಾ ಹೆಚ್ಡಿಕೆ?