ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ತೊಪ್ಪಲದೊಡ್ಡಿ ಗ್ರಾಮದ ಹೊರವಲಯದ ಖಾಲಿ ಜಾಗದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾವನ್ನು ಕವಿತಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತೊಪ್ಪಲದೊಡ್ಡಿ ಗ್ರಾಮದ ಹೊರವಲಯದ ಖಾಲಿ ಜಾಗದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗಿದೆ ಎಂದು ಅಪರಿಚಿತರೊಬ್ಬರು ದೂರು ದಾಖಲಿಸಿದ್ದರು. ಈ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು, 8 ಕೆ.ಜಿ. 400 ಗ್ರಾಂ ಹಸಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.