ರಾಯಚೂರು: ಜಿಲ್ಲೆಯಲ್ಲಿ ಇಂದು 81 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 12,006ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 47, ಮಾನವಿ 11, ಲಿಂಗಸೂಗೂರು 7, ಸಿಂಧನೂರು 10, ದೇವದುರ್ಗದಲ್ಲಿ 6 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 10,374 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 1494 ಪ್ರಕರಣಗಳು ಸಕ್ರಿಯವಾಗಿವೆ. ಇಂದು ಒಬ್ಬ ಸೋಂಕಿತ ಮೃತಪಡುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 138ಕ್ಕೆ ಏರಿಕೆಯಾಗಿದೆ.
ಇನ್ನು ಪತ್ತೆಯಾಗಿರುವ ರೋಗದ ಗುಣಲಕ್ಷಣದ ಆಧಾರದ ಮೇಲೆ ಸೋಂಕಿತರನ್ನ ಕ್ವಾರಂಟೈನ್ ಕೇಂದ್ರ, ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿ, ಸಂಪರ್ಕಗಳನ್ನ ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.