ರಾಯಚೂರು: ಸೀಮೆಎಣ್ಣೆ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಮಶಿಹಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ನಿಂಗಪ್ಪ ದಂಡಪ್ಪ(68) ಆತ್ಮಹತ್ಯೆ ಮಾಡಿಕೊಂಡವ. ಹಿರಿಯ ಮಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಈ ವಿಚಾರಕ್ಕೆ ನಿಂಗಪ್ಪ ಮದ್ಯಪಾನದ ದಾಸನಾಗಿದ್ದ ಎನ್ನಲಾಗಿದೆ. ಮಗನ ಈ ಸ್ಥಿತಿ ಕಂಡು ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ಕುರಿತು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಕಲಂ-174 ಅನ್ವಯ ಯುಡಿಆರ್ ಅಡಿ ಪ್ರಕರಣ ದಾಖಲಾಗಿದೆ.