ರಾಯಚೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿವೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಿಂಗಸೂಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
![raichuru](https://etvbharatimages.akamaized.net/etvbharat/prod-images/10660786_mng.jpg)
ಶರಣಗೌಡ (50) ಕೊಲೆಯಾದ ವ್ಯಕ್ತಿ. ಶರಣಗೌಡ ಹೊಲಕ್ಕೆ ತೆರಳಿ ವಾಪಸ್ ಆಗುವ ವೇಳೆ ಅಪರಿಚಿತರು ದಾಳಿ ನಡೆಸಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ: ಕಾರು - ಬೈಕ್ ಮಧ್ಯೆ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿ ಮೂವರು ಸ್ಥಳದಲ್ಲೇ ಸಾವು!
ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.