ರಾಯಚೂರು: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ತಂದೆ ಮೃತಪಟ್ಟು, ಮಗ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಶರಣಪ್ಪ ಪಡಶೆಟ್ಟಿ(55) ಮೃತ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಮಗ ಅನಿಲ್ಕುಮಾರ್ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಇಬ್ಬರೂ ಬೆಳಗ್ಗೆ ಗಬ್ಬೂರಿನಿಂದ ದೇವದುರ್ಗ ಪಟ್ಟಣಕ್ಕೆ ಕಾರಿನಲ್ಲಿ ತೆರಳುತ್ತಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ಕುರಿತು ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.