ರಾಯಚೂರು: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನ ಹೊರವಲಯದಲ್ಲಿ ನಡೆದಿದೆ.
ನಗರದ ಬೈಪಾಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಮನ್ಸಲಾಪುರ ಗ್ರಾಮದ ಶೇಖರ(32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 9.30ಕ್ಕೆ ಕೆಲಸ ಹೋಗುತ್ತಿರುವ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ರಾಯಚೂರು ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ವಾಹನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.