ರಾಯಚೂರು: ಕಂಟೈನರ್ ಲಾರಿ, ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಹಿಂಬದಿ ಕುಳಿತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜನತಾಪುರ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಸುವರ್ಣ ಸ್ವಾಮಿ (13) ಮೃತ ಬಾಲಕನೆಂದು ಗುರುತಿಸಲಾಗಿದೆ. ತಂದೆ-ಮಗ ಬೈಕ್ ಮೇಲೆ ಮುದಗಲ್ ಗ್ರಾಮದಿಂದ ಬನ್ನಿಗೋಳ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಕಂಟೈನರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಂದೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.
ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.