ETV Bharat / state

ಎಲ್ಲ ಬಸ್​ಗಳ ಸಂಚಾರ ಆರಂಭ: ಡಿಸಿ ಆರ್. ವೆಂಕಟೇಶ್ ಕುಮಾರ್​

ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲ ಬಸ್​ಗಳ ಸಂಚಾರ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ನೌಕರರನ್ನು ಮನವೊಲಿಸಲಾಗಿದೆ. ಜೊತೆಗೆ ಪೊಲೀಸ್ ಭದ್ರತೆಯಲ್ಲಿ ಬಸ್​​ಗಳ ಸಂಚಾರಕ್ಕೆ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಹೇಳಿದ್ದಾರೆ.

author img

By

Published : Dec 14, 2020, 4:56 PM IST

ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್
ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್

ರಾಯಚೂರು: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಬಸ್​​ಗಳ ಸಂಚಾರ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್

ನಗರದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಹಿತದೃಷ್ಠಿಯಿಂದ ಎಲ್ಲ ಬಸ್​ಗಳ ಸಂಚಾರ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ನೌಕರರನ್ನು ಮನವೊಲಿಸಲಾಗಿದೆ. ಜೊತೆಗೆ ಪೊಲೀಸ್ ಭದ್ರತೆಯಲ್ಲಿ ಬಸ್​​ಗಳ ಸಂಚಾರಕ್ಕೆ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.

ಇದನ್ನು ಓದಿ:ಸಾರಿಗೆ ನೌಕರರ ಹೋರಾಟದ ಹಿಂದೆ ಯಾವುದೋ ರಾಜಕೀಯ ಪಕ್ಷವಿದೆ: ಶೋಭಾ ಶಂಕೆ

ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸಾರಿಗೆ ಬಸ್​ಗಳ ಸಂಚಾರವನ್ನ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಆರಂಭಿಸಲು ಸೂಚಿಸಲಾಗಿದೆ. ಜತೆಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬಸ್​ಗೊಬ್ಬರು ಪೊಲೀಸ್ ಪೇದೆಯನ್ನ ನಿಯೋಜಿಸುವಂತೆ ತಿಳಿಸಲಾಗಿದೆ. ಯಾರಾದರೂ ಕಿಡಿಗೇಡಿ ಬಸ್ ಸಂಚಾರಕ್ಕೆ ಅಡ್ಡಿಯುಂಟು ಮಾಡುವುದು, ಕಲ್ಲು ಎಸೆಯುವಂತಹ ಕೃತ್ಯವೆಸಗಿದರೆ ಕಾನೂನಿನಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.