ರಾಯಚೂರು: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಗರದ ಕೆಎಸ್‌ಆರ್‌ಟಿಸಿ ನೌಕರರ ವಸತಿ ಗೃಹದ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ವೆಂಕಟಲಕ್ಷ್ಮಿ (22) ಆತ್ಮಹತ್ಯೆ ಮಾಡಿಕೊಂಡಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ.
ಕೆಎಸ್‌ಆರ್‌ಟಿಸಿ ಮೆಕ್ಯಾನಿಕಲ್ ನೌಕರರ ಪುತ್ರಿಯಾಗಿರುವ ವೆಂಕಟಲಕ್ಷ್ಮಿ 2 ನೇ ಸೆಮಿಸ್ಟರ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಪ್ರಸುತ್ತ ನಡೆಯುತ್ತಿರುವ ಪರೀಕ್ಷೆ ಎದುರಿಸಲು ಸಾಧ್ಯವಾಗದೆ ಹತಾಶೆಗೊಂಡು ಸಾವಿಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಕೆಆರ್ ಮಾರುಕಟ್ಟೆಗೆ ಬರಲಿದೆ ಹೊಸ ಲುಕ್: 33 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ
ನೇತಾಜಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.