ರಾಯಚೂರು : ಜೂನ್ 2 ರಂದು ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧ ಇಂದು ಆರೋಪಿ ಸುದರ್ಶನ್ ಯಾದವ್ ನನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದರು.
ನಗರದ 3 ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಆರೋಪಿ ಸುದರ್ಶನ ಯಾದವ್ ನನ್ನು ಹಾಜರು ಪಡಿಸಲಾಯಿತು. ನ್ಯಾಯಾಧೀಶ ಅವಿನಾಶ ಗಾಳೇ ಅವರು ವಿಚಾರಣೆ ನಡೆಸಿದ್ರು. ಇನ್ನೂ ಆರೋಪಿಯನ್ನು ಮುಂದಿನ ಹಂತದ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಆದರೆ ಅದಕ್ಕೆ ಒಪ್ಪಿಗೆ ದೊರೆತಿರಲಿಲ್ಲ. ಇಂದು ಆರೋಪಿ ಪರ ವಕೀಲರು ವಾದ ಮಂಡಿಸಿದ್ರು. ವಾದ ಆಲಿಸಿದ ನಂತರ ನ್ಯಾಯಾಧೀಶರು ಜುಲೈ 12 ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.