ETV Bharat / state

ರಾಯಚೂರಿನಲ್ಲಿ ಕೊರೊನಾ ಅಟ್ಟಹಾಸ: ಇಂದು ಒಂದೇ ದಿನ 83 ಮಂದಿಗೆ ಸೋಂಕು - ರಾಯಚೂರು ಕೊರೊನಾ ಕೇಸ್​

ರಾಯಚೂರು ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.

another 83 corona positive cases detected in raichur
ರಾಯಚೂರಿನಲ್ಲಿ ಕೊರೊನಾ ಅಟ್ಟಹಾಸ..ಇಂದು ಒಂದೇ ದಿನ 83 ಮಂದಿಗೆ ಸೋಂಕು
author img

By

Published : May 31, 2020, 9:52 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಿಂದ ವಾಪಾಸ್ ಬಂದ ಜಿಲ್ಲೆಯ ವಲಸೆ ಕಾರ್ಮಿಕರಿಗೆ ಹೆಚ್ಚಾಗಿ ಸೋಂಕು ಹರಡಿದ್ದು, ಬೆಂಗಳೂರಿನಿಂದ ಬಂದ ಓರ್ವ ವ್ಯಕ್ತಿಗೆ ಪಾಸಿಟಿವ್​ ಬಂದಿದೆ. ಇನ್ನು ಮಹಾರಾಷ್ಟ್ರದಿಂದ ವಲಸೆ ಬಂದ್ದಿದ ಕಾರ್ಮಿಕರನ್ನ ಸಾಂಸ್ಥಿಕ ಕ್ವಾರಂಟೈನ್ ಮಾಡಿ ಗಂಟಲು ದ್ರವವನ್ನ ತಪಾಸಣೆಗೆ ರವಾನಿಸಲಾಗಿತ್ತು.

ಭಾನುವಾರ ಸಂಜೆ ಇವರ ವರದಿ ಬಂದಿದ್ದು 83 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು 217 ಸೋಂಕಿತರಲ್ಲಿ 34 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಉಳಿದ 182 ಸೋಂಕಿತರನ್ನ ನಿಗದಿತ ಆಸ್ಪತ್ರೆಯಲ್ಲಿನ ಐಸೋಲೋಷನ್ ವಾರ್ಡ್​ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನ ಪತ್ತೆ ಹಚ್ಚಲಾಗುತ್ತಿದೆ.

ಇಂದು ಬಂದಿರುವ 83 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಮೂವರು ಲಿಂಗಸೂಗೂರು ತಾಲೂಕಿನವರು ಹಾಗೂ ಉಳಿದ 80 ಜನ ದೇವದುರ್ಗ ತಾಲೂಕಿನ ವಿವಿಧ ಗ್ರಾಮದವರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.