ರಾಯಚೂರು: ಗೋಲ್ ಮಾರ್ಕೆಟ್ ಬಡಾವಣೆಯ 39 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಆಗಮಿಸಿದ್ದ ಸೋಂಕಿತ ಸರಕಾರಿ ಕ್ವಾರಂಟೈನ್‌ನಲ್ಲಿದ್ದು, ಕ್ವಾರಂಟೈನ್ ಅವಧಿ ಮುಗಿದ ಬಳಿಕ ಗೃಹ ದಿಗ್ಬಂಧನಕ್ಕೆ ಕಳುಹಿಸಲಾಗಿತ್ತು. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಆಗಮಿಸಿದ್ದು ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಹೇರ್ ಕಟಿಂಗ್ ಶಾಪ್ಗೆ ಹೋಗಿದ್ದ ಎನ್ನಲಾಗುತ್ತಿದೆ.
ಸೋಂಕಿತ ವಾಸವಾಗಿದ್ದ ಗೋಲ್ ಮಾರ್ಕೆಟ್ ಬಡಾವಣೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೆ, ಆತ ಓಡಾಡಿದ್ದ ಎನ್ನಲಾದ ಸ್ಥಳಗಳು ಹಾಗೂ ರಸ್ತೆಗಳಲ್ಲಿ ಸ್ಯಾನಿಟೈಜೇಷನ್ ಮಾಡುವ ಮೂಲಕ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.