ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ವಿವಿಧ ಸಂಘ-ಸಂಘಟನೆಗಳು ಸಂಸದರು, ಶಾಸಕರಿಗೆ ಮನವಿ ಸಲ್ಲಿಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಾನವಿ ಮಾಡಿವೆ.
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲೊಂದಾದ ರಾಯಚೂರು ಜಿಲ್ಲೆಗೆ ಇಲ್ಲಿವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಒಂದು ಶೈಕ್ಷಣಿಕ ಸಂಸ್ಥೆಯಾಗಲಿ, ದೊಡ್ಡ ಕೈಗಾರಿಕೆಗಳಾಗಲಿ ಮಂಜೂರಾಗಿಲ್ಲ. ಈ ಹಿಂದೆ ನಂಜುಂಡಪ್ಪ ವರದಿಯಂತೆ ಐಐಟಿ ಮಂಜೂರಾಯಿತು ಅನ್ನುವಷ್ಟರಲ್ಲಿ ಇನ್ನೊಂದು ಜಿಲ್ಲೆಗೆ ವರ್ಗಾವಣೆಗೊಂಡಿತು. ಈ ಬಾರಿ ಆ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಲ್ಲಿಯವರೆಗೆ ರಾಜ್ಯದಿಂದ ಕೇಂದ್ರಕ್ಕೆ ಯಾವ ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎಂಬುದರ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡುವುದಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಏಮ್ಸ್ ಹೋರಾಟಗಾರರು ಹೇಳಿದ್ದಾರೆ.
ಇದನ್ನೂ ಓದಿ: COVID: ರಾಜ್ಯದಲ್ಲಿಂದು 775 ಮಂದಿಗೆ ಕೋವಿಡ್, 9 ಸೋಂಕಿತರ ಸಾವು