ETV Bharat / state

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ವರ ಬಂಧನ - murdering a person for petty reasons

ಕಳೆದ ಡಿ.15ರಂದು ರಾತ್ರಿ ದೇವದುರ್ಗ ತಾಲೂಕಿನ ಶಾವಂತಗಲ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Arrest of four people for murdering a person for petty reasons
ನಾಲ್ವರ ಬಂಧನ
author img

By

Published : Dec 25, 2020, 5:04 PM IST

ರಾಯಚೂರು: ಕಳೆದ ಡಿ.15ರಂದು ಶಾವಂತಲ್​​ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಾಗರ್, ವೀರೇಶ್, ಸುನೀಲ್ ಹಾಗೂ ಬಸವ ಬಂಧಿತ ಆರೋಪಿಗಳು. ಇವರು ಕಳೆದ ಡಿ.15ರಂದು ರಾತ್ರಿ ದೇವದುರ್ಗ ತಾಲೂಕಿನ ಶಾವಂತಗಲ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ, ಅಮರೇಶ (20) ಎಂಬ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಅಲ್ಲದೇ ಬಿಡಿಸಲು ಬಂದಿದ್ದ ಮೂವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್​ಪಿ ನಿಕ್ಕಂ ಪ್ರಕಾಶ್

ಇದನ್ನೂ ಓದಿ.. ರಾಯಚೂರು: ಎರಡು ಗುಂಪುಗಳ ಮಧ್ಯೆ ಗಲಾಟೆ, ಓರ್ವನ ಕೊಲೆ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಹಂತಕರನ್ನು‌ ಸೆರೆ ಹಿಡಿಯಲು ವಿಶೇಷ ತಂಡ ರಚಿಸಿ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಪಿ ನಿಕ್ಕಂ ಪ್ರಕಾಶ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.