ರಾಯಚೂರು: ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(AIDYO)ಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಯಿತು.
ಆಶಾ ಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್ ಆಗಿ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದಿಂದ ಅವರಿಗೆ ಕೋವಿಡ್-19 ಆರೋಗ್ಯ ಸುರಕ್ಷಿತಾ ಕಿಟ್ಗಳನ್ನ ನೀಡಬೇಕು. ಆದರೆ ಅದನ್ನು ಇಲ್ಲಿಯವರೆಗೂ ನೀಡಿಲ್ಲವೆಂದು ದೂರಿದರು.
ಇದರ ನಡುವೆ ಕೊರೊನಾ ಭೀತಿ ನಡುವೆ ಕೇವಲ ಮುಖಕ್ಕೆ ಬಟ್ಟೆ ಧರಿಸಿಕೊಂಡು ಕಾರ್ಯ ನಿರ್ವಹಿಸಿದ್ದಾರೆ. ಕೂಡಲೇ ಸರ್ಕಾರ ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿ, ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.