ರಾಯಚೂರು: ತಾಲೂಕಿನ ಲಿಂಗನಖಾನದೊಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಸೋಮವಾರದಂದು ಸಹಾಯಕ ಆಯುಕ್ತ ರಜನಿಕಾಂತ್ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ, 1 ಮತ್ತು 2ನೇ ತರಗತಿ ಮಕ್ಕಳಿಗೆ ಒಂದಿಷ್ಟು ಪ್ರಶ್ನೆಗಳನ್ನು ಕೇಳಿದ ವೇಳೆ ಅದಕ್ಕೆ ಮಕ್ಕಳು ಉತ್ತರಿಸಿದ ಹಿನ್ನೆಲೆ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
1 ಮತ್ತು 2ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಗಳ ಬಗ್ಗೆ ಸಹಾಯಕ ಆಯುಕ್ತರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಮಕ್ಕಳು ಉತ್ತರಿಸದ ಹಿನ್ನೆಲೆ ಅಲ್ಲಿದ್ದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸ ಮಾಡಿಸದೆ ಏನು ಮಾಡುತ್ತಿದ್ದಿರಿ, ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡಿ. 2ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಅಕ್ಷರಗಳು ಬರುತ್ತಿಲ್ಲವೆಂದರೆ ನೀವು ಶಾಲೆಯಲ್ಲಿ ಏನನ್ನು ಕಲಿಸುತ್ತಿದ್ದಿರಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಅಲ್ಲದೇ, ಒಂದು ವಾರದಲ್ಲಿ ಈ ಮಕ್ಕಳಿಗೆ ಅಕ್ಷರಗಳು ಓದಲು, ಬರೆಯಲು ಬರಬೇಕು. ಅ ನಿಟ್ಟಿನಲ್ಲಿ ಕೆಲಸ ಮಾಡಿ, ಮಕ್ಕಳು ಓದುವ ವಿಡಿಯೋವನ್ನು ನನಗೆ ಕಳುಹಿಸಬೇಕು ಎಂದು ತಾಕೀತು ಮಾಡಿದ್ದಾರೆ.
ಇದನ್ನೂ ಓದಿ: ತಲಕಾವೇರಿಯಲ್ಲಿ ತೀರ್ಥೋದ್ಭವ..ಬ್ರಹ್ಮ ಕುಂಡಿಕೆಯಲ್ಲಿ ತೀರ್ಥ ರೂಪಿಣಿಯಾದ ಕಾವೇರಿ