ETV Bharat / state

ಪತ್ರಕರ್ತರ ಮೇಲಿನ ಹಲ್ಲೆಗೆ ಖಂಡನೆ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹ - ಬೆಂಗಳೂರಿನಲ್ಲಿ ಪತ್ರಕರ್ತರ ಮೇಲೆ ಹಲ್ಲೆ: ರಾಯಚೂರಿನಲ್ಲಿ ಪತ್ರಕರ್ತರ ಸಂಘದಿಂದ ಖಂಡನೆ

ಬೆಂಗಳೂರು ಗಲಭೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಖಂಡಿಸಿ ರಾಯಚೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಆಕ್ರೋಶ ವ್ಯಕ್ತಪಡಿಸಿದೆ.

dsds
ಪತ್ರಕರ್ತರ ಮೇಲಿನ ಹಲ್ಲೆಗೆ ಖಂಡನೆ
author img

By

Published : Aug 12, 2020, 5:56 PM IST

ರಾಯಚೂರು: ಡಿಜಿ ಹಳ್ಳಿ ಗಲಭೆ, ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಖಂಡಿಸಿ ಆರೋಪಿಗಳ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ, ಎಸ್​ಪಿ​ಗೆ ಮನವಿ ಸಲ್ಲಿಸಲಾಯಿತು.

ಪತ್ರಕರ್ತರ ಮೇಲಿನ ಹಲ್ಲೆಗೆ ಖಂಡನೆ

ಗಲಭೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿ, ವಾಹನಗಳನ್ನ ಜಖಂಗೊಳಿಸಿದ್ದಾರೆ. ಈ ಘಟನೆಯನ್ನು ಪತ್ರಕರ್ತರ ಸಂಘ ತೀವ್ರವಾಗಿ ವಿರೋಧಿಸುತ್ತದೆ. ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನೂ ಮಾನವಿ ವರದಿಗಾರ ಶರಣಬಸವ ನೀರಮಾನವಿ ಮೇಲೆ ಸಂಘಟನೆ ಮುಖಂಡ ಪ್ರಭುರಾಜ್ ಕೊಡ್ಲಿ ಹಲ್ಲೆಗೆ ಯತ್ನಿಸಿ, ಜಾತಿ ನಿಂದನೆ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಹಾಕಿದವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಜತೆಗೆ ನಕಲಿ ಪತ್ರಕರ್ತ ಹಾವಳಿ ತಪ್ಪಿಸಬೇಕು. ಅನಧಿಕೃತ ಯೂಟ್ಯೂಬ್ ಚಾನಲ್​ಗಳಿಗೆ ಕಡಿವಾಣ ಹಾಕುವಂತೆ ಮನವಿ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.