ETV Bharat / state

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕೊನೆಗೂ ದೂರು ದಾಖಲಿಸಿಕೊಂಡ ಪೊಲೀಸರು - ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಮಗುವಿನೊಂದಿಗೆ ಆಸ್ಪತ್ರೆಗೆ ಬರುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ, ಲಿಂಗಸುಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Attempt to rape a woman in Lingsugur
ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ
author img

By

Published : Jan 27, 2021, 9:19 AM IST

ಲಿಂಗಸುಗೂರು : ಮಗುವಿನೊಂದಿಗೆ ಆಸ್ಪತ್ರೆಗೆ ಬರುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಸಮೀಪದ ಸರ್ಜಾಪುರ ಬಳಿ ನಿನ್ನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಾಗಿದೆ.

ನಿನ್ನೆ ಮಧ್ಯಾಹ್ನ ಎರಡೂವರೆ ಸುಮಾರಿಗೆ ಲಿಂಗಸುಗೂರು ಸಮೀಪದ ಸರ್ಜಾಪುರ ಬಳಿ ಬರುತ್ತಿದ್ದಾಗ ಖಾಸಗಿ ವಾಹನ ಚಾಲಕ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿದ್ದಾನೆ. ಬಳಿಕ ಮಹಿಳೆ ಜೊತೆಗಿದ್ದ ಮಗುವನ್ನು ಕಸಿದುಕೊಂಡು ಜೋಳದ ಹೊಲದತ್ತ ಓಡಿದ್ದಾನೆ. ಆಗ ಮಗುವನ್ನು ಆತನಿಂದ ಬಿಡಿಸಿಕೊಳ್ಳಲು ತೆರಳಿದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ರಸ್ತೆಯಲ್ಲಿ ತೆರಳುತ್ತಿದ್ದ ಜನರು ರಕ್ಷಣೆ ಮಾಡಿದ್ದಾರೆ. ಬಳಿಕ ತಪ್ಪಿಸಿಕೊಂಡು ಬಂದಿದ್ದ ಚಾಲಕನನ್ನು ಜನರು ವಾಹನ ಸಮೇತ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಓದಿ : ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ದೂರು ದಾಖಲಿಸಲು ಪೊಲೀಸರ ನಿರ್ಲಕ್ಷ್ಯ?

ಮಹಿಳೆ ನೀಡಿದ ಆದರಾದ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಈಟಿವಿ ಭಾರತ ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆ ಠಾಣೆಗೆ ಆಗಮಿಸಿದ್ದರು ಪ್ರಕರಣ ದಾಖಲಿಸಲು ಪೊಲೀಸರ ನಿರ್ಲಕ್ಷ್ಯ ಎಂಬ ಶೀರ್ಷೆಕಯಡಿ ಸುದ್ದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಗ್ರಾಮೀಣ ಕೂಲಿಕಾರರ ಸಂಘದ ತಾಲೂಕು ಅಧ್ಯಕ್ಷ ಗುಂಡಪ್ಪ ಯರಡೋಣಿ ಹೇಳಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.