ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ವಟಗಲ್ ಗ್ರಾಮದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯ ಉದ್ಘಾಟನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯನ್ನು ಸಚಿವ ಬಿ. ಶ್ರೀರಾಮುಲು ಬೈ ಎಲೆಕ್ಷನ್ ಪ್ರಚಾರ ಕಾರ್ಯಕ್ಕಾಗಿ ಬಳಸಿಕೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ನಡೆಯಲಿರುವ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಸ್ವಾಭಿಮಾನಿ ಸಾಹಿತಿಯಾಗಿ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವೆ; ಹನುಮಂತಪ್ಪ ಅಂಡಗಿ
ಅವರ ರಾಜೀನಾಮೆಯಿಂದ ನಾನು ಸಚಿವನಾಗಿದ್ದೇನೆ. ಹೀಗಾಗಿ ಬರುವ ಬೈ ಎಲೆಕ್ಷನ್ನಲ್ಲಿ ಮತ್ತೊಮ್ಮೆ ಪ್ರತಾಪ್ ಗೌಡ ಪಾಟೀಲ್ರಿಗೆ ಆಶೀರ್ವದಿಸಬೇಕು ಎಂದು ಶ್ರೀರಾಮುಲು ಮನವಿ ಮಾಡಿದರು. ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಭಾಗಿಯಾಗಿದ್ದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಸರ್ಕಾರಿ ಕಾರ್ಯಕ್ರಮದ ವೇದಿಕೆಯನ್ನೇ ಪ್ರಚಾರದ ವೇದಿಕೆಯನ್ನಾಗಿ ಬಳಸಿಕೊಂಡು ರಾಜಕೀಯ ಭಾಷಣ ಮಾಡಿ, ಮತಯಾಚನೆ ನಡೆಸಿದರು.