ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಭೂಮನಗುಂಡ ಗ್ರಾಮದಲ್ಲಿ 45 ಮಂದಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು.
ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಭೂಮನಗುಂಡ ಹಾಗೂ ಸುತ್ತಮುತ್ತಲಿನ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ನೇರವೇರಿಸಲಾಯಿತು. ಗರ್ಭಿಣಿಯರಿಗೆ ಉಡಿ ತುಂಬುವ ಮೂಲಕ ಸೀಮಂತ ಕಾರ್ಯಕ್ರಮವನ್ನು ನೇರವೇರಿಸಲಾಯಿತು.
ಈ ವೇಳೆ ಜಿಲ್ಲಾ ಮಹಿಳಾ ಇಂದಿರಾ ಗಾಂಧಿ ಪ್ರಿಯದರ್ಶಿನಿ ಸಂಯೋಜಕಿ ಎ.ಶ್ರೀದೇವಿ ನಾಯಕ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಪಾರ್ವತಿ, ಅಂಗನವಾಡಿ ಕೇಂದ್ರದ ಯಂಕಮ್ಮ, ಅಂಗನವಾಡಿ ಕಾರ್ಯಕರ್ತರು ಗ್ರಾಮದ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.