ರಾಯಚೂರು : ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ಕಾಡಾ ಅಧ್ಯಕ್ಷ ಆರ್.ಬಸವನಗೌಡ ತುರುವಿಹಾಳ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತು ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಿದಾಡುತ್ತಿದೆ.
ಕಳೆದ ಬಾರಿ ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಅಲ್ಪಮತಗಳಿಂದ ಆರ್.ಬಸವನಗೌಡ ತುರುವಿಹಾಳ ಪರಾಜಿತಗೊಂಡಿದ್ದರು. ಆದರೆ, ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರತಾಪ್‌ಗೌಡ ಪಾಟೀಲ್ಗೆ ಟಿಕೆಟ್ ನೀಡಲಾಗುತ್ತಿದೆ.
ಆದ್ರೆ, ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧೆ ಮಾಡಿ ಅಲ್ಪ ಮತಗಳಿಂದ ಸೋಲು ಕಂಡಿದ್ದ ಬಸವನಗೌಡ ತುರುವಿಹಾಳ, ಈ ಬಾರಿ ಬೈ ಎಲೆಕ್ಷನ್‌ಗೂ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಆದ್ರೆ, ಬಿಜೆಪಿಯಿಂದ ಪ್ರತಾಪ್‌ಗೌಡ ಪಾಟೀಲ್ ಅವರಿಗೇ ಟಿಕೆಟ್ ಪಕ್ಕಾ ಆಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ತುರುವಿಹಾಳ ಕಾಂಗ್ರೆಸ್ ಪಕ್ಷವನ್ನ ಸೇರಲಿದ್ದಾರೆ ಎನ್ನುವ ಮಾತು ಪ್ರಬಲವಾಗಿ ಕೇಳಿ ಬರುತ್ತಿದೆ.