ರಾಯಚೂರು: ಬಿ.ಕಾಂ ಎರಡನೇ ಸೆಮಿಸ್ಟರ್ ಪರೀಕ್ಷೆಯನ್ನು ಮನೆಯಲ್ಲೇ ಅಕ್ರಮವಾಗಿ ನಡೆಸುತ್ತಿದ್ದ ಘಟನೆ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ನಗರದ ಐಡಿಎಸ್‌ಎಂಡಿ ಲೇಔಟ್‌ನ ಬಾಡಿಗೆ ಮನೆಯೊಂದರಲ್ಲಿ 37 ವಿದ್ಯಾರ್ಥಿಗಳು ಅಕ್ರಮವಾಗಿ ಇಂಡಸ್ಟ್ರಿಯಲ್ ಎಕಾನಾಮಿಕ್ಸ್ ಪರೀಕ್ಷೆಯನ್ನ ಬರೆಯುತ್ತಿದ್ದರು. ಇದರ ಖಚಿತ ಮಾಹಿತಿ ಪಡೆದುಕೊಂಡ ಪರೀಕ್ಷಾ ವಿಕ್ಷಣಾ ದಳದ ಅಧಿಕಾರಿಗಳು ದಾಳಿ ನಡೆಸಿ ಬಯಲಿಗೆಳದಿದ್ದಾರೆ. ವಿವೇಕಾನಂದ ಬಿಎಡ್ ಕಾಲೇಜಿನ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳೇ ಹೆಚ್ಚಾಗಿ ಇಲ್ಲಿ ಪರೀಕ್ಷೆ ಬರೆಯುತ್ತಿದ್ದರು ಎಂದು ಹೇಳಲಾಗಿದೆ.
ಪರೀಕ್ಷೆ ಬರೆಸುತ್ತಿದ್ದ ವ್ಯಕ್ತಿ ನಾನು ಶಿಕ್ಷಣ ಸಂಸ್ಥೆಯಿಂದ ಪರೀಕ್ಷೆ ಬರೆಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಆದ್ರೆ ಪರೀಕ್ಷಾ ಕೇಂದ್ರದಲ್ಲಿ ನಡೆಯಬೇಕಾದ ಪರೀಕ್ಷೆ ಅಕ್ರಮವಾಗಿ ಮನೆಯಲ್ಲಿ ನಡೆಯುತ್ತಿತ್ತು. ಅಲ್ಲದೆ ಮನೆಯಲ್ಲಿ ಪ್ರಶ್ನೆ ಪತ್ರಿಕೆ, ಸಂಬಂಧಿಸಿದ ವಿಷಯದ ಪುಸ್ತಕ ದೊರೆತಿವೆ. ಸದ್ಯ 37 ವಿದ್ಯಾರ್ಥಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.