ರಾಯಚೂರು: ವಿವಾಹ ಆಮಂತ್ರಣ ಪತ್ರ ನೀಡಿ ವಾಪಸ್ ಬರುವಾಗ ವಧು ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ.
ಮಸ್ಕಿ ಪಟ್ಟಣದ ಹೊರವಲಯದಲ್ಲಿರುವ ಎನ್‌ಈಕೆಎಸ್‌ಆರ್‌ಟಿಸಿ ಡಿಪೋ ಬಳಿ ದುರ್ಘಟನೆ ನಡೆದಿದೆ. ಈ ಮೂವರು ಸ್ನೇಹಿತರಿಗೆ ವಿವಾಹ ಆಮಂತ್ರಣ ಪತ್ರ ನೀಡಿ ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದರು ಎಂಬ ಮಾಹಿತಿ ದೊರೆತಿದೆ.
ಘಟನೆ ನಡೆದಿದ್ದು ಹೇಗೆ?
ಮಸ್ಕಿಯಿಂದ ಲಿಂಗಸುಗೂರಿಗೆ ತ್ರಿಬಲ್ ರೈಡ್ನಲ್ಲಿ ಹೋಗುತ್ತಿದ್ದ ಸವಾರ ವೀರೇಶ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ.. ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ