ರಾಯಚೂರು: ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್ ಮ್ಯಾನೇಜರ್ ಮೃತಪಟ್ಟಿರುವ ಘಟನೆ ನಗರದ ಬಸವೇಶ್ವರ ಸರ್ಕಲ್‌ನಲ್ಲಿ ನಡೆದಿದೆ.
ನಗರದ ಪ್ರಗತಿ ಕೃಷ್ಣ ಬ್ಯಾಂಕ್ ಮ್ಯಾನೇಜರ್ ಸತ್ಯನಾಥ್ ಕಾಲೋನಿ ನಿವಾಸಿ ವಸಂತಮಾಧವ ಆಚಾರ್ಯ(57) ಮೃತ ವ್ಯಕ್ತಿ. ಅಪಘಾತದಲ್ಲಿ ಗಾಯಗೊಂಡಿದ್ದ ವಸಂತಮಾಧವ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಗೂಡ್ಸ್ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.