ರಾಯಚೂರು: ಮಸ್ಕಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 20 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿರುವ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪನವರ ಮನೆಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲರು 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಬಂದು 8 ಜಿಪಂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ಬಸವಕಲ್ಯಾಣದಲ್ಲಿ ನಾವು ಗೆದ್ದಾಗಿದ್ದು, ಬೆಳಗಾವಿ ಲೋಕಸಭೆಯಲ್ಲಿ ನಾವು ಗೆಲ್ಲಲಿದ್ದೇವೆ. ಅಭ್ಯರ್ಥಿಗಳ ಅಂತಿಮಗೊಳಿಸಿ ಪಟ್ಟಿ ಮಾಡಿ ದೆಹಲಿಗೆ ಕಳುಹಿಸಿದ್ದೇವೆ. ಇಂದು ಅಥವಾ ನಾಳೆ ಅಭ್ಯರ್ಥಿಗಳ ಪಟ್ಟಿ ಬರುತ್ತದೆ ಎಂದರು.
ಬಸವಕಲ್ಯಾಣದಲ್ಲಿ ವಿಜಯೇಂದ್ರ ಅಭ್ಯರ್ಥಿ ಆಗುವುದಿಲ್ಲ. ಅವರು ಮೈಸೂರಿಗೆ ಹೋಗಿ ಅಲ್ಲಿರುತ್ತಾರೆ. ಎರಡು ಮೂರು ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡಲಿದ್ದಾರೆ. ಮುಂದಿನ ಬಾರಿ ವರುಣಾ ಕ್ಷೇತ್ರಕ್ಕೆ ನಿಲ್ಲುವ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. 5ಎ ಕಾಲುವೆ ಬದಲಿ ವಟಗಲ್ ಬಸವೇಶ್ವರ ಏತ ನೀರಾವರಿ ಮಾಡಲಾಗುವುದು. ಅವಶ್ಯವಿರುವ ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗುವುದು ಎಂದರು.
ಓದಿ: ರಾಮನಗರ: ಎದೆಗೆ ಚುಚ್ಚಿ ಯುವಕನ ಬರ್ಬರ ಹತ್ಯೆ
ಸಿಎಂ ಯಡಿಯೂರಪ್ಪ ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ನಿಮಿತ್ತ ಜಿಲ್ಲೆಗೆ ಆಗಮಿಸಿ ಪ್ರಚಾರ ನಡೆಸಿದ ಮುಗಿದ ಬಳಿಕ ಸಿಂಧನೂರು ಪಟ್ಟಣದಲ್ಲಿ ವಾಸ್ತವ್ಯ ಮಾಡಿದ್ದರು. ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾದ ಕೆ.ವಿರೂಪಾಕ್ಷಪ್ಪನವರ ಮನೆಗೆ ಭೇಟಿ ನೀಡಿದ್ದರು.