ETV Bharat / state

ಉಪಚುನಾವಣೆ ನಂತರ ಬಿಜೆಪಿ ಸರ್ಕಾರ ಪತನ: ದಿನೇಶ್​ ಗುಂಡೂರಾವ್​ ಭವಿಷ್ಯ - KPCC President Dinesh Gundu Rao

ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕೇವಲ ಕಾಂಗ್ರೆಸ್​ ನಾಯಕರ ಮೇಲೆ ದಾಳಿ ಮಾಡುತ್ತಿದೆ. ಸಿಎಂ, ಸಚಿವ ಕೆ ಎಸ್​ ಈಶ್ವರಪ್ಪ ಶಿವಮೊಗ್ಗದ ತುಂಬಾ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​.

ದಿನೇಶ್​ ಗುಂಡೂರಾವ್​ , KPCC President Dinesh Gundu Rao
author img

By

Published : Nov 13, 2019, 11:43 AM IST

ರಾಯಚೂರು: ರಾಜ್ಯದಲ್ಲಿ ಉಪಚುನಾವಣೆ ಫಲಿತಾಂಶದ ನಂತರ ಬಿಜೆಪಿ ಸರ್ಕಾರ ಅಲ್ಪಮತಕ್ಕೆ ಕುಸಿದು ಪತನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಭವಿಷ್ಯ ನುಡಿದಿದ್ದಾರೆ.

ನಗರದ ಹೊರವಲಯದ ಯರಮರಸ್ ಸರ್ಕ್ಯೂಟ್ ಹೌಸ್​ ಸಭಾಂಗಣದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರ ಬಗ್ಗೆ ಮಾತನಾಡಿದ ಅವರು, ಅನರ್ಹತೆ ಪ್ರಕರಣ ಎದುರಿಸುತ್ತಿರುವ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಯಾವುದೇ ಕಾರಣಕ್ಕೂ ಪಕ್ಷ ದ್ರೋಹಿಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಯಚೂರಲ್ಲಿ ದಿನೇಶ್​ ಗುಂಡೂರಾವ್​ ಪತ್ರಿಕಾಗೋಷ್ಟಿ

ಇನ್ನು, ಶಿವಮೊಗ್ಗದ ತುಂಬಾ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರು ಗಳಿಸಿದ ಅಕ್ರಮ ಆಸ್ತಿಯೇ ತುಂಬಿದೆ. ಆದರೆ, ಅದರ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸುವುದಿಲ್ಲ ಎಂದು ದಿನೇಶ್​ ಗುಂಡೂರಾವ್​ ಆರೋಪಿಸಿದರು. ಅಲ್ಲದೆ, ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಕೋಟ್ಯಂತರ ರೂ. ಆಫರ್ ನೀಡಿದೆ. ಈ ಬಗ್ಗೆ ಕೆಪಿಸಿಸಿ ವತಿಯಿಂದ ದಾಖಲಿಸಿದ ದೂರಿನ ಬಗ್ಗೆ ತನಿಖೆ ನಡೆಸಲು ಕೇಂದ್ರ ಆಸಕ್ತಿ ತೋರಿಸುತ್ತಿಲ್ಲ. ಕಾಂಗ್ರೆಸ್ ನಾಯಕರ ವಿರುದ್ಧ ಮಾತ್ರ ನಿರಂತರ ದಾಳಿ ನಡೆಯುತ್ತಿವೆ ದೂರಿದರು.

ಜೆಡಿಎಸ್ ಜತೆ ಮೈತ್ರಿ ಕೇವಲ ಲೋಕಸಭೆ ಚುನಾವಣೆಯವರೆಗಿತ್ತು. ಆನಂತರದಲ್ಲಿ ಯಾವುದೇ ಹೊದಾಣಿಕೆ, ಮೈತ್ರಿ ಇಲ್ಲ. ಉಪಚುನಾವಣೆ ನಂತರದಲ್ಲಿ ಮತ್ತೆ ಜೆಡಿಎಸ್ ಜತೆ ಕೈ ಜೋಡಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗದು ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ರು.

Intro:Body:

rcr over all

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.