ETV Bharat / state

ಬಿಜೆಪಿ ಸರ್ಕಾರ ದಿವಾಳಿ ಅಂಚಿನಲ್ಲಿದೆ : ಈಶ್ವರ ಖಂಡ್ರೆ - ಈಶ್ವರ ಖಂಡ್ರೆ ಲೆಟೆಸ್ಟ್ ನ್ಯೂಸ್​

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈಶ್ವರ ಖಂಡ್ರೆ
Ishwar Khandre
author img

By

Published : Jan 30, 2020, 10:42 PM IST

ರಾಯಚೂರು: ರಾಜ್ಯ ಬಿಜೆಪಿ ಸರ್ಕಾರ ದಿವಾಳಿ ಅಂಚಿನಲ್ಲಿದ್ದು, ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗುಡುಗಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಅನುದಾನ ಬರಬೇಕು. ಆದ್ರೆ ಅದು ಬಿಡುಗಡೆಯಾಗುತ್ತಿಲ್ಲ. ಇದರಿಂದ ಸರ್ಕಾರ ದಿವಾಳಿ ಅಂಚಿನಲ್ಲಿದೆ. ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳಾಗುತ್ತಿದೆ. ಅಸಂವಿಧಾನತ್ಮಕ ಕಾಯಿದೆಯಿಂದ ದೇಶದಲ್ಲಿ ಕೋಮು ಸಾಮರಸ್ಯ ಉಂಟಾಗುತ್ತಿದೆ ಎಂದರು.

ರಾಜ್ಯ ಸರ್ಕಾರದ ದೋರಣೆಯನ್ನ ಕಾಂಗ್ರೆಸ್ ಸಹಿಸುವುದಿಲ್ಲ. ಈ ಬಗ್ಗೆ ವಿಧಾನಸಭೆ ಒಳಗಡೆ ಮತ್ತು ಹೊರಗಡೆ ಹೋರಾಟ ಮಾಡಲಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆ ವಿಳಂಬವಾಗಿರುವುದರ ಕುರಿತು ಪ್ರತಿಕ್ರಿಯಿಸಿ,ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ವೈಯಕ್ತಿಕ ಅಭಿಪ್ರಾಯವನ್ನು ಪಕ್ಷಕ್ಕೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನಿಸಲಿದೆ. ಪಕ್ಷದ ಆಂತರಿಕ ವಿಷಯವನ್ನ ಬಹಿರಂಗವಾಗಿ ನಾನು ಮಾತನಾಡಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.