ETV Bharat / state

ರಾಯಚೂರಿನಲ್ಲಿ ಅದ್ದೂರಿಯಾಗಿ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆ‌ - ಕೇಂದ್ರ ಸಚಿವ ಭಗವಂತ ಖೂಬಾ

ಬಿಜೆಪಿ ಹಮ್ಮಿಕೊಂಡಿರುವ ಜನಾಶೀರ್ವಾದ ಯಾತ್ರೆ‌ ರಾಯಚೂರು ನಗರದಲ್ಲಿ ನಡೆಯಿತು. ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

BJP Janashirvad Yatra at Raichur
ರಾಯಚೂರಿನಲ್ಲಿ ಅದ್ದೂರಿಯಾಗಿ ನಡೆದ ಬಿಜೆಪಿ ಜನಾರ್ಶೀವಾದ ಯಾತ್ರೆ‌
author img

By

Published : Aug 19, 2021, 7:33 AM IST

ರಾಯಚೂರು: ಬಿಜೆಪಿಯಿಂದ ಆಯೋಜಿಸಲಾಗಿರುವ ಜನಾಶೀರ್ವಾದ ಯಾತ್ರೆ‌ ಬುಧವಾರ ನಗರದಲ್ಲಿ ನಡೆಯಿತು. ಕೇಂದ್ರ ಸಚಿವ ಭಗವಂತ ಖೂಬಾರನ್ನು ಬೃಹತ್ ಸೇಬಿನ ಹಾರ ಹಾಕುವ ಮೂಲಕ ಪಕ್ಷದ ಕಾರ್ಯಕರ್ತರು ಸ್ವಾಗತಿಸಿದರು.

ರಾಯಚೂರಿನಲ್ಲಿ ಅದ್ದೂರಿಯಾಗಿ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆ‌

ಇದಾದ ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಸಚಿವರು ಮೆರವಣಿಗೆ ನಡೆಸಿದರು. ಚಂದ್ರಮೌಳೇಶ್ವರ ಸೇರಿದಂತೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದರು. ಸೋಮವಾರಪೇಟೆ ಹಾಗೂ ಕಿಲ್ಲೆಬೃಹನ್ ಮಠಕ್ಕೆ ಭೇಟಿ ನೀಡಿ ಮಠಾಧೀಶರ ಆಶೀರ್ವಾದ ಪಡೆದುಕೊಂಡರು. ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲೂ ಸಚಿವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಆರ್‌ಡಿಎ ಗೋಪಾಲ ರೆಡ್ಡಿ ಸೇರಿದಂತೆ ಹಲವು ಮುಖಂಡರು ಮತ್ತು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.