ರಾಯಚೂರು : ಜಿಲ್ಲೆಯ ಬಿಸಿಲಿನ ತಾಪಮಾನ ಏರಿಕೆಯಾದಂತೆ ಚುನಾವಣೆ ಕಾವು ಸಹ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಈವರೆಗೆ ನಡೆದ ಚುನಾವಣೆಯಲ್ಲಿ ಒಂದು ಬಾರಿ ಬಿಜೆಪಿ, ಇನ್ನೊಂದು ಸ್ವತಂತ್ರ ಪಕ್ಷದ ಅಭ್ಯರ್ಥಿ, ಉಳಿದಂತೆ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವ ಮೂಲಕ ದಾಖಲೆ ನಿರ್ಮಿಸಿದೆ.
ಈ ದಾಖಲೆಯನ್ನ ಮುರಿಯುವುದಕ್ಕೆ ಶತಾಯ-ಗತಾಯ ಪ್ರಯತ್ನ ನಡೆಸಿ ಅಬ್ಬರದ ಪ್ರಚಾರ ಮಾಡುತ್ತಿರುವ ಬಿಜೆಪಿ, ಈ ಬಾರಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆಯಂತೆ. ಈ ಕುರಿತಾಗಿ ರಾಯಚೂರು ನಗರ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಈಟಿವಿ ಭಾರತ್ನೊಂದಿಗೆ ಮಾತನಾಡಿದ್ದಾರೆ.