ETV Bharat / state

ಕಟೀಲ್​ ಆಡಿಯೋ ವೈರಲ್​​ ವಿಚಾರಕ್ಕೆ ಪ್ರಾಮುಖ್ಯತೆ ನೀಡುವುದು ಅವಶ್ಯವಿಲ್ಲ : ಶಾಸಕ ಶಿವರಾಜ್ ಪಾಟೀಲ್ - ರಾಯಚೂರಿನಲ್ಲಿ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ

ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗಬೇಕಾದರೆ ಹೈಕಮಾಂಡ್ ನಿರ್ಣಯಿಸುತ್ತದೆ. ಹೀಗಾಗಿ, ಪಕ್ಷದ ಹಿರಿಯ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಳೆದ 2 ವರ್ಷಗಳಿಂದ ಯಡಿಯೂರಪ್ಪನವರು ಯಶಸ್ವಿಯಾಗಿ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ರಾಜ್ಯದ ಆರ್ಥಿಕ ಸಂಕಷ್ಟದ ನಡುವೆಯೂ ಕೂಡ ಉತ್ತಮ ಕೆಲಸ ಮಾಡುತ್ತಿದ್ದಾರೆ, ಇವೆಲ್ಲವುಗಳನ್ನು ಹೈಕಮಾಂಡ್ ಗಮನಿಸುತ್ತಿದೆ..

ಕಟೀಲ್​ ಆಡಿಯೋ ವೈರಲ್​​ ಕುರಿತು ಶಾಸಕ ಶಿವರಾಜ್ ಪಾಟೀಲ್ ಹೇಳಿಕೆ

author img

By

Published : Jul 19, 2021, 8:51 PM IST

ರಾಯಚೂರು :ಸಿಎಂ ಬದಲಾವಣೆ ಆಡಿಯೋ ವೈರಲ್​​ ಆಗಿರುವುದರ ಬಗ್ಗೆ ಹೆಚ್ಚು ಪ್ರಾಮುಖ್ಯತೆ ನೀಡುವುದು ಅವಶ್ಯವಿಲ್ಲವೆಂದು ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ವಿಚಾರವಾಗಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಧ್ವನಿ ನನ್ನದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಡಿಯೋ ವೈರಲ್ ಆಗಿರುವುದಕ್ಕೆ ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿ ಪತ್ರ ಬರೆಯುವುದಾಗಿ ಸಹ ತಿಳಿಸಿದ್ದಾರೆ. ಇನ್ನುಳಿದ ಅಧಿಕಾರವಾಧಿಯಲ್ಲಿ ಬಿ ಎಸ್ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದರು.

ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗಬೇಕಾದರೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹೀಗಾಗಿ, ಪಕ್ಷದ ಹಿರಿಯ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಳೆದ 2 ವರ್ಷಗಳಿಂದ ಯಡಿಯೂರಪ್ಪನವರು ಯಶಸ್ವಿಯಾಗಿ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ರಾಜ್ಯದ ಆರ್ಥಿಕ ಸಂಕಷ್ಟದ ನಡುವೆಯೂ ಕೂಡ ಉತ್ತಮ ಕೆಲಸ ಮಾಡುತ್ತಿದ್ದಾರೆ, ಇವೆಲ್ಲವುಗಳನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದರು.

ಇದನ್ನೂ ಓದಿ : ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜತೆ ಜಾರಕಿಹೊಳಿ ಸಹೋದರರಿಂದ ಪ್ರತ್ಯೇಕ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.