ರಾಯಚೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಬಿರುಸಿನ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯಿಂದ ತಿರಸ್ಕೃತಗೊಂಡು ಕಡಿಮೆ ಸ್ಥಾನಗಳನ್ನು ಪಡೆದ ಜೆಡಿಎಸ್ ಸರ್ಕಾರ ನಡೆಸುತ್ತಿದೆ. ಆದರೆ, 104 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ವಿರೋಧ ಪಕ್ಷದಲ್ಲಿ ಕುಳಿತಕೊಳ್ಳುವ ಪರಿಸ್ಥಿತಿ ಉಂಟಾಯಿತು ಎಂದರು.
ಇದೇ ವೇಳೆ, ಚುನಾವಣೆಯ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ಯಡಿಯೂರಪ್ಪ, ಕೊಪ್ಪಳದ ಅಭ್ಯರ್ಥಿ ಸಂಗಣ್ಣ ಕರಡಿ ಸೇರಿದಂತೆ ಒಟ್ಟು 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇದಾದ ಬಳಿಕ 24 ಗಂಟೆಗಳಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಯಡಿಯೂರಪ್ಪ ಅವರು ಪ್ರಚಾರಕ್ಕೆ ಆಗಮಿಸಿದ ಹೆಲಿಕಾಪ್ಟರನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದರು.