ETV Bharat / state

ಕೆರೆಯಲ್ಲಿ ಬಾಲಕ ಶವವಾಗಿ ಪತ್ತೆ - Raichur news

ಬಾಲಕನೋರ್ವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

boy found dead in lake
ಬಾಲಕ ಶವವಾಗಿ ಪತ್ತೆ
author img

By

Published : Aug 29, 2020, 6:22 PM IST

ರಾಯಚೂರು: ಕೆರೆಯಲ್ಲಿ ಈಜಲು ತೆರಳಿದ ಬಾಲಕನೋರ್ವ ನೀರುಪಾಲು‌ ಆಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಗುಡಲದಿನ್ನಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಬೋಗಾಪುರ ಗ್ರಾಮದ ಬಾಲಕ ಕೇಶಪ್ಪ(16)ನ ಮೃತದೇಹ ದೊರಕಿದೆ.

ಬೆಳಗ್ಗೆ ಹೊಲಕ್ಕೆ ತೆರಳಿದ್ದಾಗ,‌ ಜಮೀನು ಬಳಿಯಿರುವ ಕೆರೆಯಲ್ಲಿ ಈಜಲು ಹೋಗಿ ಈ ಘಟನೆ ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸಹಾಯದಿಂದ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬಾಲಕ ಶವವಾಗಿ ಪತ್ತೆ

ಮೇಲ್ನೋಟಕ್ಕೆ ಈಜಲು ತೆರಳಿದಾಗ ಈ ವೇಳೆ‌ ಘಟನೆ ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ತುರುವಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.