ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಹತ್ತಿರದ ಕೋಠಾ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದೆ.
ಮೃತ ವ್ಯಕ್ತಿ ಯಾರು ಎನ್ನುವ ಗುರುತು ಪತ್ತೆಯಾಗಿಲ್ಲ. ಸುಮಾರು 30ರಿಂದ 35 ವಯಸ್ಸು ಆಗಿರಬಹುದು ಎಂದು ಆಂದಾಜಿಸಲಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.