ರಾಯಚೂರು: ನಗರದ ರೈಲ್ವೆ ಸ್ಟೇಷನ್ ರನ್ನಿಂಗ್ ರೂಮ್ ಹತ್ತಿರದ ಮುಳ್ಳಿನ ಕಂಟಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಕುರುಮೇಶ ನಾಯಕ(23) ಮೃತಪಟ್ಟಿರುವ ಯುವಕನೆಂದು ಗುರುತಿಸಲಾಗಿದೆ. ನಿನ್ನೆ ತಡ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ವಿಷಯ ತಿಳಿದಿದೆ.
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಕೊಲೆ ಸಂಶಯ ವ್ಯಕ್ತಪಡಿಸಲಾಗಿದೆ. ನಗರದ ಪೆಟ್ರೋಲ್ ಬಂಕ್ನಲ್ಲಿ ಕುರುಮೇಶ ನಾಯಕ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದ್ದು, ಪ್ರೀತಿಯ ವಿಷಯಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣವೇನೆಂಬುದು ತಿಳಿದು ಬಂದಿಲ್ಲ. ಘಟನೆ ಬಗ್ಗೆ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.