ರಾಯಚೂರು: ಜಿಲ್ಲೆಯಾದ್ಯಂತ ಇಂದು ಬೆಳಿಗ್ಗೆಯಿಂದ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ನಗರದ ಕೇಂದ್ರೀಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಜಿಲ್ಲೆಯ ಸಿಂಧನೂರು, ಲಿಂಗಸುಗೂರು, ದೇವದುರ್ಗ, ಮಸ್ಕಿ, ಸಿರವಾರ, ಮಾನ್ವಿ ತಾಲೂಕು ಹಾಗೂ ಅಂತರ್ ಜಿಲ್ಲೆಗಳಿಗೆ ಬಸ್ ಬಿಡುವ ಮೂಲಕ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗುತ್ತಿದೆ.
ಬಸ್ ಸಂಚಾರ ಆರಂಭವಾಗುತ್ತಿದ್ದಂತೆ ಪ್ರಯಾಣಿಕರು ಬಸ್‌ಸ್ಟ್ಯಾಂಡ್‌ನತ್ತ ಅಗಮಿಸುತ್ತಿದ್ದಾರೆ. ಕೊರೊನಾ ಸೋಂಕಿನ ಭೀತಿ ಹಾಗೂ ಕೋವಿಡ್ ಮಾರ್ಗಸೂಚಿ ಅನುಸರಿಬೇಕಿದ್ದು ಬಸ್‌ಗಳ ಲಭ್ಯವಿರುವ ಆಸನಗಳ ಶೇ.50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ.
ಕೊರೊನಾ ಸೋಂಕಿನ ಎರಡನೇ ಅಲೆಯಿಂದಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸದ್ಯ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ಪುನರಾರಂಭಿಸಲಾಗಿದೆ. ಇದರಿಂದ ಇಷ್ಟು ದಿನ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ಬಸ್ ನಿಲ್ದಾಣಗಳಲ್ಲಿ ಇಂದು ಜನಸಂದಣಿ ಕಂಡು ಬಂದಿದೆ.
ಕೋವಿಡ್ ಮಾರ್ಗಸೂಚಿ ಅನ್ವಯ ಬಸ್‌ನಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಅಂತರ್ ಜಿಲ್ಲೆಗಳಿಗೆ 100 ಬಸ್‌ಗಳು ಸಂಚರಿಸಲು ಅನುವು ಮಾಡಿಕೊಡಬೇಕು ಎನ್ನುವ ಉದ್ದೇಶವಿದೆ ಎನ್ನುತ್ತಾರೆ ಎನ್‌ಈಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ವೆಂಕಟೇಶ್.