ರಾಯಚೂರು: ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಬಿ.ವಿ.ನಾಯಕ ಪದಗ್ರಹಣ ಮಾಡಿದ್ರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಮ್ಮುಖದಲ್ಲಿ ಹಿಂದಿನ ಅಧ್ಯಕ್ಷ ರಾಮಣ್ಣ ಇರಬಗೇರಾ ಅವರಿಂದ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಮುಖಂಡರು, ಪಕ್ಷ ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ಕಾಂಗ್ರೆಸ್ನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಬಸವನಗೌಡ ಪಾಟೀಲ್ ಇಟಗಿ, ಬಸವನಗೌಡ ದದ್ದಲ್, ಶರಣಪ್ಪ ಮಟ್ಟರೂ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಸೈಯದ್ ಯಾಸೀನ್ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ರು.