ETV Bharat / state

ಪ್ರತಾಪ್​ಗೌಡ ಪರ ಸಿಎಂ ಪುತ್ರನ ಭರ್ಜರಿ ಮತ ಬೇಟೆ - ಬಿವೈ ವಿಜಯೇಂದ್ರ ಮತ ಪ್ರಚಾರ

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್ ಪರ ಭರ್ಜರಿ ಮತ ಬೇಟೆ ನಡೆಸಿದರು.

by-vijayendra-by-election-campaign-in-maski
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ
author img

By

Published : Apr 2, 2021, 6:15 PM IST

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿದ್ದು ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಟ್ಟಣದಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಪರ‌ ಪ್ರಚಾರ ಮಾಡಿದರು.

ಪ್ರತಾಪ್​ಗೌಡ ಪರ ಸಿಎಂ ಪುತ್ರನ ಭರ್ಜರಿ ಮತ ಬೇಟೆ

ನಗರಕ್ಕೆ‌ ಆಗಮಿಸಿದ ಸಿಎಂ ಪುತ್ರನಿಗೆ ಹೂಮಳೆ ಸುರಿಸಿ ಕಾರ್ಯಕರ್ತರು ಬರಮಾಡಿಕೊಂಡರು. ಬಳಿಕ ಮಟ್ಟರೂ ಗ್ರಾಮದಿಂದ ಬೈಕ್ ರ್ಯಾಲಿ ಆರಂಭಿಸಿ ಅಂಕುಶದೊಡ್ಡಿ, ಸಂತೆಕಲ್ಲೂರು, ಬುದ್ದಿನ್ನಿ ಗ್ರಾಮಗಳಲ್ಲಿ ಸಂಚರಿಸಿ ಅಭ್ಯರ್ಥಿ ಪರ ಮತಯಾಚನೆ ನಡೆಸಿದರು.

ಸಂತೆಕಲ್ಲೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಾರಿ ಅಂತರದಲ್ಲಿ ಗೆಲುವು ಸಾಧಿಸಲಿದೆ. ಸಿಡಿ ಕೇಸ್ ಬೈ ಎಲೆಕ್ಷನ್ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದರು.

ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅದಕ್ಕೆ ಸ್ಪಷ್ಟನೆ ನೀಡಿದ್ದು, ಪಕ್ಷದ ಹಿರಿಯ ಮುಖಂಡರು ಕುಳಿತ ಚರ್ಚೆ ಮಾಡುತ್ತಾರೆ ಎಂದು ಹೇಳಿದರು. ಬಸವನಗೌಡ ಯತ್ನಾಳ್ ಪದೇ ಪದೇ ಸಿಎಂ ವಿರುದ್ದ ಟೀಕಿಸುತ್ತಾರೆ ಎಂಬ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಿದೆ ನಕ್ಕು ಜಾರಿಕೊಂಡರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.