ರಾಯಚೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ವೆಂಕಟೇಶ್ ಹೀರಾ(50) ಮೃತ ದುರ್ದೈವಿ. ಮತ್ತೊಬ್ಬ ಪ್ರಯಾಣಿಕ ವೀರೇಶ ಎಂಬುವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
![Car accident in Raichur one man died](https://etvbharatimages.akamaized.net/etvbharat/prod-images/kn-rcr-06-accident-death-photo-7202440_29062020193313_2906f_1593439393_927.jpg)
ಜಾಲಹಳ್ಳಿಯಿಂದ ರಾಯಚೂರು ಕಡೆಗೆ ಬರುವಾಗ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡ ವೆಂಕಟೇಶ್ ಹಾಗೂ ವೀರೇಶ ಎಂಬುವವರನ್ನು ಆಸ್ಪತ್ರೆಗೆ ರವಾನಿಸುವ ವೇಳೆ ವೆಂಕಟೇಶ್ ಸಾವಿಗೀಡಾಗಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.