ETV Bharat / state

ರಾಯಚೂರಿನಲ್ಲಿ ಕಾರು-ಲಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು - Car-lorry accident

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

car-lorry collision in Raichur: Three killed on spot
ರಾಯಚೂರಿನಲ್ಲಿ ಕಾರು-ಲಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
author img

By

Published : Sep 4, 2020, 6:15 PM IST

Updated : Sep 4, 2020, 10:37 PM IST

ರಾಯಚೂರು: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸದ್ಯ ಮೃತ ದೇಹಗಳನ್ನು ಜಾಲಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತರನ್ನು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ದೇವರಭೂಪೂರು ಗ್ರಾಮದ ಪದ್ಮಮ ಹನುಮಗೌಡ(40), ಅಂಬಣ್ಣ ಆದಾನಗೌಡ(65), ರಾಮಣ್ಣ ಗುಡದನಾಳ(99) ಎಂದು ಗುರುತಿಸಲಾಗಿದೆ. ಇನ್ನೂ ಕಾರು ಚಾಲಕ ಶಿವನಗೌಡ ಆದಾನಗೌಡ ಹಾಗೂ ಗುಂಡಪ್ಪ ಹನುಮಂತ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆಂದು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತ ಪದ್ಮಮ್ಮ ಅವರ ಅಣ್ಣನ ಶವಸಂಸ್ಕಾರ ಮುಗಿಸಿಕೊಂಡು ದೇವರಭೂಪುರು ಗ್ರಾಮದಿಂದ ಪದ್ಮಮ್ಮ ಹಾಗೂ ನಾಲ್ವರು ಇಂಡಿಕಾ ಕಾರ್ ನಲ್ಲಿ ವಾಪಾಸಾಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಕಾರು ಮತ್ತು ಲಾರಿಯ ನಡುವೆ ಡಿಕ್ಕಿಯಾಗಿ ಶವಸಂಸ್ಕಾರಕ್ಕೆ ತೆರಳಿದ್ದ ಐವರಲ್ಲಿ ಮೂವರು ಶವವಾಗಿದ್ದಾರೆ.

ಘಟನೆಗೆ ಚಾಲಕನ ಅತಿವೇಗ, ಆಲಕ್ಷತನವೇ ಕಾರಣವೆಂದು ಹೇಳಲಾಗುತ್ತಿದೆ. ಘಟನೆ ಕುರಿತು ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Sep 4, 2020, 10:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.