ರಾಯಚೂರು: ಬಳ್ಳಾರಿ ಜಿಲ್ಲೆಯ ಶಾಸಕ ಜಿ. ಸೋಮಶೇಖರ ರೆಡ್ಡಿ ವಿವಾದ್ಮತಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ರಾಯಚೂರಿನ ಸದರ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪ್ರಗತಿಪರ ಸಂಘಟನೆ ಮುಖಂಡ ಆರ್.ಮಾನಸಯ್ಯ ಸೋಮಶೇಖರ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಬಳ್ಳಾರಿ 2020 ಜ. 3ರಂದು ಪೌರತ್ವ ಕಾಯ್ದೆ ಪರವಾಗಿ ಬಿಜೆಪಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ಜಿ.ಸೋಮಶೇಖರ ರೆಡ್ಡಿ ವಿವಾದಾತ್ಮಕ ಭಾಷಣ ಮಾಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ರೋಷಾವೇಷ: ಸಿಎಎ ವಿರೋಧಿಸುವವರಿಗೆ ಖಡಕ್ ವಾರ್ನಿಂಗ್
ಶೋಮಶೇಖರ ರೆಡ್ಡಿ ಕಾರ್ಯಕ್ರಮದಲ್ಲಿ ನೆರೆದ ಸಾವಿರಾರು ಜನರ ಎದುರು ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪ್ರಚೋದಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಭಯೋತ್ಪಾದನೆ ಹರಡುವ ಸಂಘಟಿತ ಸಶಸ್ತ್ರ ದಾಳಿಗೆ ಕರೆ ನೀಡಿದ್ದಾರೆ. ಶಾಂತಿ ಪ್ರಿಯರನ್ನು ಗುರಿಯಾಗಿಸಿಕೊಂಡು ಅಪರಾಧ ಮಾಡುವ ಉದ್ದೇಶದಿಂದ ಭಾಷಣ ಮಾಡಿದ್ದಾರೆ ಎಂದು ದೂರಿದ್ದಾರೆ. ಅಷ್ಟೇ ಅಲ್ಲದೆ, ಶಾಸಕ ಜಿ.ಸೋಮಶೇಖರ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಒತ್ತಾಯಿಸಿದ್ದಾರೆ.