ರಾಯಚೂರು: ಕೋವಿಡ್ ನಿಯಮವನ್ನು ಉಲ್ಲಂಘಿಸಿ ಮದುವೆ ಸಮಾರಂಭ ಮಾಡುತ್ತಿದ್ದ ಪಾಲಕರ ವಿರುದ್ಧ ರಾಯಚೂರಿನಲ್ಲಿ ಪ್ರಕರಣ ದಾಖಲಾಗಿದೆ.
ಲಿಂಗಸೂಗೂರು ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ನಿನ್ನೆ ತಾಲೂಕಾಡಳಿತದ ಪರವಾನಗಿ ಪಡೆಯದೆ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಲಾಕ್ಡೌನ್ ಜಾರಿ ಹಿನ್ನೆಲೆಯಲ್ಲಿ ಬೀಟ್‌ಗೆ ತೆರೆಳಿದ ಪೊಲೀಸರಿಗೆ ಮದುವೆ ನಡೆಯುತ್ತಿರುವುದು ಗೊತ್ತಾಗಿದೆ. ಈ ವೇಳೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ತಾಲೂಕಾಡಳಿತದ ಪರವಾನಗಿ ಪತ್ರವಿರಲಿಲ್ಲ. ಅಲ್ಲದೇ ಜನರು ಗುಂಪು ಗುಂಪಾಗಿ ಸೇರಿಸಿಕೊಂಡಿದ್ದು, ಮಾಸ್ಕ್, ಸ್ಯಾನಿಟೈಜರ್ ಮತ್ತು ಸಾಮಾಜಿಕ ಅಂತರವಿಲ್ಲದೆ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ.
ಹೀಗಾಗಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಮಗಳ ಮದುವೆ ಮಾಡುತ್ತಿದ್ದ ಅಲ್ಲಾಭಕ್ಷ ವಿರುದ್ಧ ಲಿಂಗಸೂಗೂರು ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.